February 3, 2026

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ:
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: 18 ವಾರ್ಡ್ ಗಳ ಪೈಕಿ 17 ವಾರ್ಡ್ ಗಳ ಪಟ್ಟಿ ಬಿಡುಗಡೆ

0
IMG-20211214-WA0041.jpg

ವಿಟ್ಲ: ಇದೇ 27 ರಂದು ನಡೆಯಲಿರುವ ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ 18 ವಾರ್ಡ್ ಗಳ ಪೈಕಿ 17 ವಾರ್ಡ್ ಗಳಿಗೆ ಆಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದೆ.

ನಿನ್ನೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಇಂದು ಕಾಂಗ್ರೆಸ್ ಬಿಡುಗಡೆಗೊಳಿಸಿದೆ.

ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸಿದ್ದಾರೆ. ಪ್ರಬಲ ಪೈಪೋಟಿ ಇರುವ 11 ವಾರ್ಡ್ ಗೆ ಇನ್ನೂ ಅಭ್ಯರ್ಥಿ ಬಗ್ಗೆ ಘೋಷಣೆ ಮಾಡಿಲ್ಲ. ನಾಳೆಯೊಳಗಡೆ ಬಿಡುಗಡೆ ಮಾಡುತ್ತೇವೆ ಎಂದು ಶಕುಂತಳಾ ಶೆಟ್ಟಿ ತಿಳಿಸಿದರು‌.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಕೋಶಾಧಿಕಾರಿ ಶಶಿಧರ ಹೆಗ್ಡೆ, ಜಿಲ್ಲಾ ವೀಕ್ಷಕ ಮಹಮ್ಮದ್ ಕುಂಜತ್ತಬೈಲು, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಾರಾಂ ಕೆ.ವಿ, ಪ್ರವೀಣ್ ಚಂದ್ರ ಆಳ್ವ, ಮುರಳೀಧರ ರೈ ಮಠಂತಬೆಟ್ಟು, ಎಂ.ಎಸ್ ಮಹಮ್ಮದ್, ಚಂದ್ರಹಾಸ ಕರ್ಕೆರ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!