December 19, 2025

ಮಂದಗತಿಯಿಂದ ಸಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ(NH-73): ಕಾಮಗಾರಿಯ ವಿರುದ್ಧ ಬೆಳ್ತಂಗಡಿಯಲ್ಲಿ ಹೆದ್ದಾರಿ ತಡೆದು SDPI ಪ್ರತಿಭಟನೆ

0
IMG-20240912-WA0004.jpg

ಬೆಳ್ತಂಗಡಿ: ಮಂದಗತಿಯಿಂದ ಸಾಗುತ್ತಿರುವ ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವತಿಯಿಂದ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಗುರುವಾರ ಬೆಳ್ತಂಗಡಿಯ ಮೂರುಮಾರ್ಗದ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ಕ್ಷೇತ್ರ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಮಾತನಾಡಿ, ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯ ಆರಂಭಗೊಂಡು ವರ್ಷಗಳೆ ಕಳೆದರು ಇನ್ನು ಕಾಮಗಾರಿ ಪೂರ್ಣಗೊಳ್ಳದೆ ದಿನ ನಿತ್ಯ ಅಫಘಾತಗಳು ಸಂಭವಿಸುತ್ತಿವೆ. ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ಚಿಕ್ಕಮಗಳೂರು ಮತ್ತು ದ. ಕ ಜಿಲ್ಲೆಯ ಸಂಪರ್ಕ ರಸ್ತೆಯಾಗಿರುದರಿಂದ ನಿತ್ಯ ಸಾವಿರಾರು ವಾಹನಗಳು ಮೂಲಕ ಸಂಚರಿಸುತ್ತವೆ. ಹದಗೆಟ್ಟ ರಸ್ತೆಯಿಂದ ರಾಜ್ಯ ಸಾರಿಗೆ ಬಸ್‌ಗಳನ್ನು ಕಡಿಮೆಗೊಳಿಸಲಾಗಿದೆ. ವ್ಯಾಪಾರ ವಹಿವಾಟಿಗಾಗಿ ತೊಂದರೆಯಾಗಿದೆ. ಉಭಯ ಜಿಲ್ಲೆಗಳ ಸಂಪರ್ಕವೇ ಕಡಿತ ಗೊಳ್ಳುವ ಆತಂಕ ಇದೆ. ತಕ್ಷಣ ರಸ್ತೆ ನಿರ್ಮಾಣದ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ SDPI ಪಕ್ಷದ ಬೆಳ್ತಂಗಡಿ ಮುಖಂಡರು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!