ಗ್ರಾಮ ಪಂಚಾಯತ್ ಮಾಜಿ ಸದಸ್ಯನ ಗುಂಡಿಕ್ಕಿ ಬರ್ಬರ ಹತ್ಯೆ
ಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಾಗ್ದಾರಿ ರಸ್ತೆಯ ಖಾನಾಪುರ ಬಳಿ ಗುಂಡಿಕ್ಕಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನನ್ನು ಗುಂಡಿಕ್ಕಿ ಬರ್ಬರ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ವಿಶ್ವನಾಥ್ ಜಮಾದಾರ (50) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಹತ್ಯೆಯಾದ ವಿಶ್ವನಾಥ್ ಪಡುಸಾವಳಿಯಿಂದ ಆಳಂದ ಪಟ್ಟಣಕ್ಕೆ ಬೈಕ್ ನಲ್ಲಿ ಬರುತ್ತಿದ್ದರು. ಎದುರಿಗೆ ಮತ್ತೊಂದು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.





