ಮಂಗಳೂರು: ಅಟೋ ಚಾಲಕ ಆತ್ಮಹತ್ಯೆ
ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡ ಅಟೋ ಚಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಳ್ಳಕಾಡಿನಲ್ಲಿ ನಡೆದಿದೆ.
41 ವರ್ಷ ಪ್ರಾಯದ ಸಂತೋಷ್ ಎಂಬವರು ಮುಳ್ಳಕಾಡಿನ ನಾಲ್ಕನೇ ಮೈಲಿಯ ತಮ್ಮ ರೂಮಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದ್ದು, ಇಂದು(ಸೆ.15) ವಾಸನೆ ಬರುತ್ತಿರುವುದನ್ನ ಗಮನಿಸಿದ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಸಂತೋಷ್ ಅವಿವಾಹಿತರಾಗಿದ್ದು, ಅವರ ಕುಟುಂಬಸ್ಥರು ಯಾರೂ ಕೂಡ ಅವರ ಸಂಪರ್ಕದಲ್ಲಿ ಇರಲಿಲ್ಲ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇದೇ ಕಾರಣದಿಂದ ಸದಾ ಏಕಾಂಗಿಯಾಗಿ ಇರುತ್ತಿದ್ದ ಸಂತೋಷ್ ಸ್ಥಳೀಯರ ಜೊತೆ ಕೂಡ ಅಷ್ಟಾಗಿ ಬೆರೆಯುತ್ತಿರಲಿಲ್ಲ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದ್ರೂ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ನೀಡಿದ್ದರು.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.





