ವಿದ್ಯಾರ್ಥಿನಿಯರ ಮೈಮುಟ್ಟಿ ಕಿರುಕುಳ: ಸರ್ಕಾರಿ ಶಾಲೆಯ ಶಿಕ್ಷಕನ ಬಂಧನ
ಬೆಳಗಾವಿ : ಸರ್ಕಾರಿ ಶಾಲೆಯ ಶಿಕ್ಷಕನೋರ್ವ ವಿದ್ಯಾರ್ಥಿನಿಯರ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗುತ್ತಿದ್ದ ಘಟನೆ ಬೆಳಗಾವಿಯ ಚಿಕ್ಕೋಡಿಯಲ್ಲಿ ನಡೆದಿದೆ.
ಆರೋಪಿ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರೆದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಹೇಳುತ್ತಿದ್ದ. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಸೇವ್ ಮಾಡಿಕೊಳ್ಳುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ.
ತರಗತಿಯಲ್ಲಿ ಪಾಠ ಮಾಡುವುದನ್ನು ಬಿಟ್ಟು ವಿಚಿತ್ರವಾಗಿ ಕಾಮುಕನಂತೆ ವರ್ತಿಸುತಿದ್ದನಂತೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ತನ್ನ ತಾಯಿಯ ಬಳಿ ಹೇಳಿಕೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮೊಬೈಲ್ ನಲ್ಲಿ ಪತ್ತೆಯಾಯ್ತು ಫೋಟೋಗಳು :
ಬಂಧಿತ ಶಿಕ್ಷಕ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ. ಅವನ ಮೊಬೈಲ್ನಲ್ಲಿ 100ಕ್ಕೂ ಹೆಚ್ಚು ಫೋಟೋಗಳು ಪತ್ತೆಯಾಗಿವೆ.
ಪ್ರಕರಣ ಸಂಬಂಧ ಬೆಳಗಾವಿ ಎಸ್‌ಪಿ ಡಾ.ಭೀಮಾಶಂಕರ್ ಗುಳೇದ್ ಮಾತನಾಡಿ, “ಶಿಕ್ಷಕ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಅಂಗಾಂಗಗಳನ್ನ ಮುಟ್ಟುತ್ತಿದ್ದನು. ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ಖಾಸ*ಗಿ ಅಂಗಾಂಗಳ ಫೋಟೋ ತೆಗೆದುಕೊಂಡು ಬಾ ಎನ್ನುತ್ತಿದ್ದ ಎಂದು ವಿದ್ಯಾರ್ಥಿನಿಯರ ಹೇಳಿಕೆಯಿಂದ ಮೇಲ್ನೋಟಕ್ಕೆ ದೃಢಪಟ್ಟಿದೆ” ಎಂದರು.





