ಬಿ.ಸಿ ರೋಡ್: ಪುರಸಭಾ ಮಾಜಿ ಅಧ್ಯಕ್ಷರ ಪ್ರಚೋದನಕಾರಿ ಹೇಳಿಕೆ: ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಸಂಘಪರಿವಾರದ ಕಾರ್ಯಕರ್ತರು
ಬಂಟ್ವಾಳ: ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿ.ಸಿ.ರೋಡ್ ನಲ್ಲಿ ಇಂದು ಬೆಳಗ್ಗೆ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಬಿ.ಸಿ.ರೋಡ್ ನಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಗುಂಪು ಜಮಾಯಿಸಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಕಲ್ಪಿಸಿದ್ದಾರೆ.
ಈ ನಡುವೆ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ಹಾಗೂ ಪುರಸಭಾ ಸದಸ್ಯ ಹಸೈನಾರ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಪ್ರಕರಣ ದಾಖಲಾಗಿದೆ.
ಅದೇರೀತಿ ಶರಣ್ ಪಂಪ್ವೆಲ್, ಪುನೀತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





