May 5, 2026

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

0
image_editor_output_image-614141877-1726488487646.jpg

ಆನೇಕಲ್: ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು, ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಮಿಳುನಾಡು ಗಡಿ ಪ್ರದೇಶವಾದ ಹೊಸೂರು ಸಮೀಪದ ಸೂಳಗಿರಿ ಬಳಿ ನಡೆದಿದೆ. ಆನೇಕಲ್ ತಾಲೂಕಿನ ರಾಚಮಾನಹಳ್ಳಿಯ ನಿವಾಸಿ ಅರ್ಚಕ ಶ್ರೀನಿವಾಸ್ ಮೃತ‌ ದುರ್ದೈವಿ.

ದೇವಾಲಯದ ಅರ್ಚಕರಾಗಿದ್ದ ಶ್ರೀನಿವಾಸ್, ಪೂಜೆಯ ನಿಮಿತ್ತ ಬೈಕ್‌ ಮೂಲಕ ಆನೇಕಲ್‌ನಿಂದ ಹೋಗುತ್ತಿದ್ದರು. ಈ ವೇಳೆ ತಮಿಳುನಾಡಿನ ಲಾರಿಯೊಂದರ ಬ್ರೇಕ್ ಫೇಲ್ ಆಗಿ ಹೆದ್ದಾರಿಯಿಂದ ಡಿವೈಡರ್ ದಾಟಿಕೊಂಡು ಬಂದು ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಶ್ರೀನಿವಾಸ್ ಅವರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಶ್ರೀನಿವಾಸ್ ಸ್ಥಳದಲ್ಲಿಯೇ ಮೃತಪಟ್ಟರೆ, ರಾಘವೇಂದ್ರ ಎಂಬುವವರಿಗೆ ಗಂಭೀರ ಗಾ*ಯವಾಗಿದೆ.

Leave a Reply

Your email address will not be published. Required fields are marked *

error: Content is protected !!