ವಿಟ್ಲ: ಕೇಂದ್ರ ಜುಮಾ ಮಸೀದಿ ವತಿಯಿಂದ ಈದ್ ಮಿಲಾದ್ ಆಚರಣೆ
ವಿಟ್ಲ: ವಿಶ್ವ ಪ್ರವಾದಿ ಮುಹಮ್ಮದ್ ಮುಸ್ತಫಾ (ಸ.ಅ.) ರವರ ಜನ್ಮದಿನಾಚರಣೆ ಈದ್ ಮಿಲಾದ್ ನ್ನು ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಮಸೀದಿ ಅಧ್ಯಕ್ಷ ಅಶ್ರಫ್ ಮಹಮ್ಮದ್ ಪೊನ್ನೋಟು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಖತೀಬ್ ದಾವೂದ್ ಹನೀಫಿ ನೇತೃತ್ವದಲ್ಲಿ ಮೌಲೂದ್ ಪಾರಾಯಣ ಹಾಗೂ ಸಾಮೂಹಿಕ ದುವಾ ನಡೆಯಿತು.
ಮಸೀದಿಯ ಉಪಾಧ್ಯಕ್ಷರಾದ ವಿ.ಎಸ್ ಇಬ್ರಾಹಿಂ ಹಾಗೂ ಮಹಮ್ಮದ್ ಗಮಿ, ಕೋಶಾಧಿಕಾರಿ ಶೆರೀಫ್ ಪೊನ್ನೋಟು, ಕಾರ್ಯದರ್ಶಿ ಇಸ್ಮಾಯಿಲ್ ಶಾಫಿ, ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ, ಹೊರೈಝನ್ ಪಬ್ಲಿಕ್ ಸ್ಕೂಲ್ ನ ಅಧ್ಯಕ್ಷ ಅಝೀಝ್ ಸನ ಉಪಾಧ್ಯಕ್ಷ ವಿ.ಕೆ.ಎಂ ಅಶ್ರಫ್, ಕಾರ್ಯದರ್ಶಿ ನೋಟರಿ ಅಬೂಬಕರ್, ಶೀತಲ್ ಇಕ್ಬಾಲ್, ಹಮೀದ್ ಬದ್ರಿಯಾ, ಜಮಾಅತ್ ಯೂತ್ ವಿಂಗ್ ಅಧ್ಯಕ್ಷ ರಫೀಕ್ ಪೊನ್ನೋಟು, ಉಪಾಧ್ಯಕ್ಷ ನಮೀರ್ ಹಳೆಮನೆ, ಮದರಸ ಅಧ್ಯಕ್ಷ ಶಮೀರ್ ಪಳಿಕೆ, ಹಕೀಂ ಅರ್ಷದಿ, ಅಬೂಬಕರ್ ಮದನಿ, ಸದರ್ ಅಬ್ದುಲ್ಲ ದಾರಿಮಿ ಮುಂತಾದವರು ಉಪಸ್ಥಿತರಿದ್ದರು.





