December 19, 2025

ಮಂಗಳೂರು: ಉಪನ್ಯಾಸಕಿ ಅರ್ಚನಾ ಕಾಮತ್ ಸಾವು

0
image_editor_output_image827545853-1726555746042.jpg

ಮಂಗಳೂರು: ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್ (33) ಎಂಬವರು ಭಾನುವಾರ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ ಲಿವರ್‌ನ ಅಗತ್ಯವಿತ್ತು ಎಂದು ಹೇಳಲಾಗಿದೆ. ಅವರಿಗೆ ಲಿವರ್ ದಾನ ಮಾಡಲೆಂದು ಹಲವರನ್ನು ತಪಾಸಣೆಗೆ ಒಳಪಡಿಸಲಾಗಿತ್ತು.

ಆದರೆ ತಪಾಸನೆಗೆ ಒಳಪಟ್ಟವರ ಪೈಕಿ ಯಾರೊಬ್ಬರ ರಕ್ತದ ಗುಂಪು ಕೂಡ ಹೊಂದಾಣಿಕೆಯಾಗಿರಲಿಲ್ಲ. ಆದರೆ ಉಪನ್ಯಾಸಕಿ ಅರ್ಚನಾರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು. ಹಾಗಾಗಿ ಅರ್ಚನಾ ಲಿವರ್ ಭಾಗದ ದಾನಕ್ಕೆ ಒಪ್ಪಿದ್ದರು. ಅದರಂತೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾರ ಲಿವರ್‌ನ ಭಾಗಶಃ ಭಾಗ ತೆಗೆದು ಸಂಬಂಧಿ ಮಹಿಳೆಗೆ ಜೋಡಿಸುವ ಶಸ್ತ್ರಚಿಕಿತ್ಸೆ ನಡೆದಿತ್ತು. ಅಲ್ಲದೆ ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆ ಕೂಡ ಹೊಂದಿದ್ದರು.

4 ದಿನಗಳ ಹಿಂದೆ ಅರ್ಚನಾ ಏಕಾಏಕಿ ಅಸ್ವಸ್ಥಗೊಂಡಿದ್ದು ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಸಾವನ್ನಪ್ಪಿದ್ದಾರೆ. ಇನ್ನು ಅರ್ಚನಾರಿಂದ ಲಿವರ್ ದಾನ ಪಡೆದ ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇನ್ನು ಅರ್ಚನಾ ಅವರ ಹಠಾತ್ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಅರ್ಚನಾ ಅವರು ನಗರದ ಕೆನರಾ ಕಾಲೇಜಿನಲ್ಲಿ ಈ ಮೊದಲು ಉಪನ್ಯಾಸಕಿಯಾಗಿದ್ದರು. ಬಳಿಕ ಮಣೇಲ್ ಶ್ರೀನಿವಾಸ ನಾಯಕ್ ಎಂಬಿಎ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅರ್ಚನಾ ಪತಿ ಸಿಎ ಚೇತನ್ ಕಾಮತ್ ಮತ್ತು 4 ವರ್ಷ ಪ್ರಾಯದ ಪುತ್ರನನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!