September 20, 2024

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ: ಶಾಸಕ ನರೇಂದ್ರಸ್ವಾಮಿ ಗಂಭೀರ ಆರೋಪ

0

ಮಳವಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುತ್ತಾ ಗ್ರಾಮೀಣ ಮಹಿಳೆಯರ ಶೋಷಣೆ ಮಾಡಲಾಗುತ್ತಿದೆ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಆರೋಪ ಮಾಡಿದ್ದಾರೆ.

ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ಸೋಮವಾರ ನೂತನ ಗ್ರಾಮ ಪಂಚಾಯತ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಹೊರಟಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ಸರಕಾರದ ಸಂಜೀವಿನಿ ಯೋಜನೆಯ ಮೂಲಕ ಸ್ವಗ್ರಾಮದಲ್ಲಿ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಿ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಅವರು ಹೇಳಿದರು.

Leave a Reply

Your email address will not be published. Required fields are marked *

error: Content is protected !!