May 6, 2026

ಬಂಟ್ವಾಳ: ಮೀಲಾದುನ್ನಬಿ ಪ್ರಯುಕ್ತ ಮಸೀದಿಗೆ ತೆರಳಿದ್ದಾಗ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗ,ನಗದು ಕಳವು

0
image_editor_output_image1923507813-1726645940587.jpg

ಬಂಟ್ವಾಳ: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮಸೀದಿಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ‌‌ಸೆ.16 ರಂದು ನಡೆದಿದೆ.

ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.
‌‌ಸೆ.16ರ ಸೋಮವಾರ ಬೆಳಿಗ್ಗೆ ಈದ್ ಮಿಲಾದ್ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ಮಸೀದಿಗೆ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

ರಾತ್ರಿ 12.45 ಗಂಟೆಗೆ ಮಸೀದಿಯಿಂದ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ, ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!