ಮಂಗಳೂರು: ಕುಲಶೇಖರದ ಮನೆಯಲ್ಲಿ ಕಳವು: 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಕುಲಶೇಖರದ ಮನೆಯೊಂದರಿಂದ 2021ರಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಾರ್ಕಳ ಬೆಲ್ಮಣ್ ಮಟ್ಕಕೆರೆ ಹೌಸ್ ರೋಹಿತ್ ಮಥಾಯಿಸ್ ಬಂಧಿತ ಆರೋಪಿ. ಈತನ ಬಳಿಯಿಂದ ಕಳವು ಮಾಡಿದ 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.
ಕುಲಶೇಖರದ ಮಹಿಳೆಯೊಂದಿಗೆ ವಾಸಮಾಡಿಕೊಂಡಿದ್ದ ಆರೋಪಿ 2021 ನೇ ಡಿಸೆಂಬರ್ ತಿಂಗಳಿನ ಮೊದಲನೇ ವಾರದಲ್ಲಿ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.