ಕಂಕನಾಡಿ: ನಿವೃತ್ತ ಪಿಡಿಒ ಹತ್ಯೆಗೈದ ಆರೋಪಿಯ ಬಂಧನ
ಮಂಗಳೂರು: ಮಹಿಳೆಯರೊಂದಿಗೆ ಸ್ನೇಹದ ನಾಟಕವಾಡಿ ಅವರೊಂದಿಗೆ ಸಂಪರ್ಕ ಇಟ್ಟುಕೊಂಡು ಅವರಿಂದಲೇ ಚಿನ್ನಾಭರಣ ದೋಚುತ್ತಿದ್ದ ಕಳ್ಳ, ನಿವೃತ್ತ ಪಿಡಿಒ ಓರ್ವರನ್ನು ಹತ್ಯೆಗೈದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ಬೆಳ್ಮಣ್ಣಿನ ರೋಹಿತ್ ಮಥಾಯಿಸ್ (33) ಬಂಧಿತ ಆರೋಪಿ. ಈತ 2021ರ ಡಿಸೆಂಬರ್ ತಿಂಗಳ ಮೊದಲ ವಾರದಿಂದ ಕುಲಶೇಖರದ ಮಹಿಳೆಯೋರ್ವರ ಜತೆ ಕೆಲವು ತಿಂಗಳು ಸಂಪರ್ಕವನ್ನಿಟ್ಟುಕೊಂಡು ಆಕೆಯೊಂದಿಗೆ ವಾಸವಿದ್ದು, ಬಳಿಕ ಆಕೆಯ ಮನೆಯಿಂದಲೇ ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿ ಹೋಗಿದ್ದ. ಈ ಬಗ್ಗೆ ಪ್ರಕರಣ ದಾಖಲಾಗಿತ್ತು.





