March 22, 2026

ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

0
image_editor_output_image1571902886-1726731787446.jpg

ಬೆಂಗಳೂರು: ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಅಂದು ವಿರೋಧ ಪಕ್ಷ ಸ್ಥಾನದಲ್ಲಿದ್ದ ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಇಂದು ಗುರುವಾರ ನಿಧನರಾಗಿದ್ದಾರೆ.

ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣನವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ವಾಪಸ್ಸಾಗಿದ್ದರು. ಆದರೆ ಇಂದು ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!