February 3, 2026

ಶಿವಮೊಗ್ಗ: ಕುಸಿದು ಬಿದ್ದು ವೈದ್ಯಕೀಯ ವಿದ್ಯಾರ್ಥಿ ಮೃತ್ಯು

0
image_editor_output_image-107627726-1726777730810.jpg

ಶಿವಮೊಗ್ಗ: ವಾಯುವಿಹಾರ ಮಾಡುತ್ತಿದ್ದಾಗ ಕುಸಿದು ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗದ ಹೆಲಿಪ್ಯಾಡ್‌ನಲ್ಲಿ ಬುಧವಾರ ಸಂಜೆ(ಸೆ18) ಸಂಭವಿಸಿದೆ.
ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ

ಎರಡನೇ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯಾಗಿದ್ದ ಶರಾವತಿ ನಗರ ನಿವಾಸಿ ಪೃಥ್ವಿರಾಜ್ (20) ಮೃತ ಪಟ್ಟ ದುರ್ದೈವಿ. ಸಂಜೆ ವಾಯು ವಿಹಾರಕ್ಕೆ ತೆರಳಿದ್ದಾಗ ಕುಸಿದು ಬಿದ್ದಿದ್ದು ಕೂಡಲೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದರು. ಸಾವಿಗೆ ಹೃದಯಾಘಾತವೇ ಕಾರಣ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!