February 3, 2026

ಕಬಿನಿ ನಾಲೆಯಲ್ಲಿ ಬಿದ್ದು 9ನೇ ತರಗತಿಯ ವಿದ್ಯಾರ್ಥಿ ಮೃತ್ಯು

0
image_editor_output_image-109474768-1726809866773.jpg

ಚಾಮರಾಜನಗರ : ಪ್ರೌಢ ಶಾಲಾ ವಿದ್ಯಾರ್ಥಿಯೊಬ್ಬ ಕಬಿನಿ ನಾಲೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಬಸವಟ್ಟಿ ಗ್ರಾಮದಲ್ಲಿ ನಡೆದಿದೆ.

ಬಸವಟ್ಟಿ ಗ್ರಾಮದ ಮಹದೇವಮ್ಮ ಎಂಬುವವರ ಪುತ್ರ ವೈ.ಎನ್.ರೋಹಿತ್ (14) ಮೃತ ವಿದ್ಯಾರ್ಥಿ.

ಈತ ಸಂತೇಮರಹಳ್ಳಿಯ ಸರಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಬುಧವಾರ ಸಂಜೆ ಕಬಿನಿ 42ರ ಉಪ ನಾಲೆ ಕಡೆ ತೆರಳಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!