May 5, 2026

ಕಂಟೇನರ್  ಢಿಕ್ಕಿ: ಈರುಳ್ಳಿ ತುಂಬಿದ್ದ ಟೆಂಪೋ ಪಲ್ಟಿ: ಓರ್ವ ಸಾವು

0
image_editor_output_image-1660141584-1726899342447.jpg

ನೆಲಮಂಗಲ: ಹಿಂಬದಿಯಿಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಈರುಳ್ಳಿ ತುಂಬಿದ್ದ ಟೆಂಪೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲದ ಅಂಚೆಪಾಳ್ಯದ ಬಳಿ ನಡೆದಿದೆ.

ತುಮಕೂರು ಮಾರ್ಗವಾಗಿ ಬೆಂಗಳೂರಿನ ಯಶವಂತಪುರ ಮಾರುಕಟ್ಟೆಗೆ ಬರುತ್ತಿದ್ದ ಈರುಳ್ಳಿ ತುಂಬಿದ ಟೆಂಪೋಗೆ ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಕಂಟೇನರ್ ಲಾರಿ ಡಿಕ್ಕಿ ಹೊಡೆದಿದೆ.

ಕಂಟೇನರ್ ಗುದ್ದಿದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಘಟನೆಯಲ್ಲಿ ಈರುಳ್ಳಿ ಟೆಂಪೋದಲ್ಲಿದ್ದ ಗಂಗಾಧರಪ್ಪ (55) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ

Leave a Reply

Your email address will not be published. Required fields are marked *

error: Content is protected !!