February 3, 2026

ಚಿಕ್ಕಮಗಳೂರು: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು

0
image_editor_output_image123918406-1726899662658.jpg

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸುಮಾರು 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ಶನಿವಾರ (ಸೆ.21) ಮುಂಜಾನೆ ಸಂಭವಿಸಿದೆ.

ಬೆಂಗಳೂರಿನಿಂದ ಹೊರನಾಡಿಗೆ ಕಾರಿನಲ್ಲಿ ಹೋಗುತ್ತಿದ್ದ ಪ್ರವಾಸಿಗರು ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ತಿರುವಿನಲ್ಲಿ ದಟ್ಟ ಮಂಜಿನಿಂದ ರಸ್ತೆ ಕಾಣದೆ ನಿಯಂತ್ರಣ ಕಳೆದುಕೊಂಡು ಮೂವತ್ತು ಅಡಿ ಆಳದಲ್ಲಿದ್ದ ಪಂಚಾಯತ್ ಅಂಗಳಕ್ಕೆ ಬಿದ್ದಿದೆ.

ಘಟನೆಯಲ್ಲಿ ಗಾಯಗೊಂಡವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗಿದ್ದು. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದೆ. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!