ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಾಯಕಿ ರುಕ್ಸಾನಾ ಸಾವು
ಭುವನೇಶ್ವರ: ಜನಪ್ರಿಯ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಅವರು ಭುವನೇಶ್ವರದ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಸಾವನ್ನಪ್ಪಿರುವ ಘಟನೆ ಒಡಿಶಾದಲ್ಲಿ ನಡೆದಿದೆ.
27 ವರ್ಷದ ರುಕ್ಸಾನಾ ಸ್ಕ್ರಬ್ ಟೈಫಸ್ (ಬ್ಯಾಕ್ಟೀರಿಯಾದಿಂದ ಉಂಟಾಗುವ ಕಾಯಿಲೆ) ಚಿಕಿತ್ಸೆಗೆ ಒಳಗಾಗಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಆದ್ರೆ ಸಾವಿಗೆ ನಿಖರ ಕಾರಣವನ್ನು ಬಹಿರಂಗಪಡಿಸಿಲ್ಲ. ಆದಾಗ್ಯೂ ಅವರಿಗೆ ನಿರಂತರ ಬೆದರಿಕೆಗಳು ಬರುತ್ತಿದ್ದವು, ಜೊತೆಗೆ ತನ್ನ ಪ್ರತಿಸ್ಪರ್ಧಿ ಗಾಯಕನಿಂದಾಗಿ ವಿಷ ಸೇವಿಸಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ





