May 5, 2026

ಉಡುಪಿ: ಗುಡ್ಡಕ್ಕೆ ಢಿಕ್ಕಿ ಹೊಡೆದ ಕಾರು

0
image_editor_output_image2032301193-1726901271595.jpg

ಉಡುಪಿ: ಜಿಲ್ಲೆಯಲ್ಲಿ ಕಾರೊಂದು ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಗದಗದಿಂದ ಪುತ್ತೂರಿಗೆ ಪ್ರಯಾಣ ಮಾಡುತ್ತಿದ್ದ ಮಾರುತಿ ವ್ಯಾಗನರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗುಡ್ಡಕ್ಕೆ ಡಿಕ್ಕಿ ಹೊಡೆದ ಘಟನೆ ಉಡುಪಿ ಜಿಲ್ಲೆಯ ಮುನಿಯಾಲುವಿನಲ್ಲಿ ಶನಿವಾರ ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದರೆ ಕಾರು ಬಹುತೇಕ ಜಖಂಗೊಂಡಿದೆ.

ನಿದ್ದೆ ಮಂಪರು ಬಂದ ಕಾರಣ ಚಾಲಕನಿಗೆ ನಿಯಂತ್ರಣ ತಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!