February 3, 2026

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರನಿಗೆ ಗಂಭೀರ ಗಾಯ

0
IMG-20240921-WA0006.jpg

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಪುರುಷರಕಟ್ಟೆಯಲ್ಲಿ ಸೆ.21 ರಂದು ರಾತ್ರಿ ನಡೆದಿದೆ.

ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಬ್ರೀಝಾ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಆಕ್ಟಿವ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಪಟ್ಟಿದ್ದು, ಗಂಭೀರ ಗಾಯವಾಗಿದೆ.

ಗಂಭೀರ ಗಾಯಗೊಂಡಿರುವ ಆಕ್ಟಿವಾ ಸವಾರನನ್ನು ಹೋಳಿಗೆ ವ್ಯಾಪಾರಿ, ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಗಣೇಶ್ ಎಂದು ಗುರುತಿಸಲಾಗಿದೆ. ಗಾಯಾಳು ಗಣೇಶರವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದರು. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!