February 3, 2026

ಶಿವಮೊಗ್ಗ | ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ವಂಚನೆ: ಬ್ಯಾಂಕ್ ಅಧಿಕಾರಿ ಆತ್ಮಹತ್ಯೆ

0
image_editor_output_image164627981-1727035095511.jpg

ಶಿವಮೊಗ್ಗ : ಶೋಕಿ ಜೀವನಕ್ಕೆ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿದ್ದ ಗ್ರಾಹಕರ ಹಣವನ್ನು ವಂಚನೆ ಮಾಡಿ ಕೋಟಿ ರೂಪಾಯಿ ಲಪಟಾಯಿಸಿದ ಬ್ಯಾಂಕ್ ಉದ್ಯೋಗಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ ನಡೆದಿದೆ.

ತೀರ್ಥಹಳ್ಳಿ ತಾಲೂಕಿನ ಆರಗದ ಸುನೀಲ್ (35 ವರ್ಷ) ಮೃತ ವ್ಯಕ್ತಿಯಾಗಿದ್ದಾನೆ ಯಡೂರಿನ ಕೆನರಾ ಬ್ಯಾಂಕ್ ನಲ್ಲಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸುಲೀನ್ 8 ಖಾತೆಗಳಿಂದ ಠೇವಣಿ ಇಟ್ಟಿದ್ದ ಸುಮಾರು 1 ಕೋಟಿ ರೂಪಾಯಿಗೂ ಅಧಿಕ ಹಣವನ್ನು ವಂಚಿಸಿದ್ದ.

ಈ ಬಗ್ಗೆ 2023 ಡಿಸೆಂಬರ್ ನಲ್ಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸುನಿಲ್ ಜೈಲಿಗೂ ಹೋಗಿದ್ದ. ನಂತರ ಜಾಮೀನಿನ ಮೇಲೆ ಹೊರ ಬಂದಿದ್ದ ಈತ ಆನ್ಲೈನ್ ವ್ಯವಹಾರದಲ್ಲಿ ಹಣ ಕಳೆದುಕೊಂಡಿದ್ದ ಎಂದು ಹೇಳಲಾಗುತ್ತಿದೆ.

ಆನ್ಲೈನ್ ವ್ಯವಹಾರ ನಡೆಸಿ ಹಣ ಕಳೆದುಕೊಂಡ ಸುನೀಲ್ ಗುರುವಾರ ವಿಷ ಸೇವಿಸಿದ್ದ ವಿಷಯ ತಿಳಿಯುತ್ತಿದ್ದಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!