February 3, 2026

ಪುತ್ತೂರು: ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವು

0
image_editor_output_image1536778898-1727035396926.jpg

ಪುತ್ತೂರು: ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಆಕ್ಟಿವಾ ಸವಾರ ಸಾವನ್ನಪ್ಪಿರುವ ಘಟನೆ ಪುರುಷರಕಟ್ಟೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಪುರುಷರಕಟ್ಟೆ ಇಂದಿರಾ ನಗರ ನಿವಾಸಿ ಹೋಳಿಗೆ ವ್ಯಾಪಾರಿ ಗಣೇಶ್ ಮೃತ ದುರ್ದೈವಿ. ಗಣೇಶ್ ಪುರುಷರಕಟ್ಟೆಯಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆಕ್ಟಿವಾಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಢಿಕ್ಕಿಯ ರಭಸಕ್ಕೆ ಆಕ್ಟಿವಾ ಸವಾರ ಗಾಡಿ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಗಂಭೀರ ಗಾಯಗಳಾಗಿತ್ತು ಎಂದು ತಿಳಿದು ಬಂದಿದೆ.ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!