ಸೌದಿ ಅರೇಬಿಯಾದಲ್ಲಿ ಕಾರು ಅಪಘಾತ: ಉಳ್ಳಾಲ ಮೂಲದ ತಾಯಿ, ಮಗು ಮೃತ್ಯು
ಉಳ್ಳಾಲ: ಸೌದಿ ಅರೇಬಿಯಾದ ಧಮಾಮ್ ಬಳಿ ಶುಕ್ರವಾರ(ಸೆ.20) ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ತಾಯಿ, ಮಗು ಸಾ*ವನ್ನಪ್ಪಿದ್ದಾರೆ.
ಹೈದರ್ ಉಳ್ಳಾಲ್ ಅವರ ಪುತ್ರಿ ಸಫಾ ಫಾತಿಮಾ (30) ಹಾಗೂ ಎರಡೂವರೆ ವರ್ಷದ ಮೊಮ್ಮಗ ಮೃತ ದುರ್ದೈವಿಗಳು.
ಶುಕ್ರವಾರ ಸಂಜೆ ವೇಳೆ ಮದೀನದಿಂದ ಕಾರಿನಲ್ಲಿ ಸಫಾ ಫಾತಿಮಾ ತನ್ನ ಪತಿ ಮಲಪುರಂ ಆರಿಕೋಡ್ನ ಸುಹೈಲ್ (35) ಮತ್ತು ಸಹೋದರ ಮುಹವಿಯ(23) ಜೊತೆಗೆ ದಮಾಮ್ ನಲ್ಲಿರುವ ಹೈದರ್ ಉಳ್ಳಾಲ್ ಅವರ ಮನೆಗೆ ತೆರಳುತ್ತಿದ್ದರು.
ಈ ವೇಳೆ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಸುಹೈಲ್, ಮಕ್ಕಳಾದ ಅಬ್ದುಲ್ ಮಲಿಕ್ (7), ಅಬ್ದುಲ್ ರಹಿಮಾನ್ (6) ಹಾಗೂ ಅಹ್ಮದ್ (5) ತೀವ್ರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ




