February 3, 2026

ಪುತ್ತೂರು: ಆ್ಯಂಬುಲೆನ್ಸ್, ಪಿಕಪ್ ನಡುವೆ ಅಪಘಾತ: ಚಾಲಕ, ಮಗುವಿಗೆ ಗಾಯ

0
image_editor_output_image1929503588-1727156423103.jpg

ಪುತ್ತೂರು: ಆಂಬ್ಯುಲೆನ್ಸ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿ, ಚಾಲಕ ಹಾಗೂ ಆಂಬ್ಯುಲೆನ್ ನಲ್ಲಿದ್ದ ಮಗು ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.

ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು.

ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!