ಮುಡಾ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ತನಿಖೆಗೆ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದೆ.
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ