February 3, 2026

ಬೈಂದೂರು: ದೇವಸ್ಥಾನದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

0
image_editor_output_image1448362449-1727244833564.jpg

ಬೈಂದೂರು: ಬೈಂದೂರು ಸೇನೇಶ್ವರ ದೇವಸ್ಥಾನದ ಹಿಂಬದಿಯ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಬೈಂದೂರು ಯೋಜನಾ ನಗರದ ನಿವಾಸಿ‌ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿಯ ನಿವಾಸಿ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಮೃತಪಟ್ಟ ವಿದ್ಯಾರ್ಥಿಗಳು.

ಬೈಂದೂರು ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ನಾಗೇಂದ್ರ ಹಾಗೂ ಶಫಾನ್ ಮಧ್ಯಾಹ್ನ ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದರು. ಇಬ್ಬರಿಗೂ ಸರಿಯಾಗಿ ಈಜು ಬಾರದ ಪರಿಣಾಮ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!