ಬೈಂದೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಶಾಲಾ ವಿದ್ಯಾರ್ಥಿಗಳು ಮುಳುಗಿ ಸಾವು

ಉಡುಪಿ: ಉಡುಪಿ ಜಿಲ್ಲೆಯ ಯಡ್ತರೆ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಶಾಲಾ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಬೈಂದೂರು ಯೋಜನಾ ನಗರದ ನಿವಾಸಿ ಕೃಷ್ಣ ಅವರ ಪುತ್ರ ನಾಗೇಂದ್ರ (13) ಹಾಗೂ ಶಾನು ಶಾಲಿಯಾನ್ ಅವರ ಪುತ್ರ ಮೊಹಮದ್ ಶಫಾನ್ (13) ಎಂದು ಗುರುತಿಸಲಾಗಿದ್ದು, ಇಬ್ಬರೂ ಬೈಂದೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾಗಿದ್ದರು.
ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಮಂಗಳವಾರ ರಾತ್ರಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.