ಬಂಟ್ವಾಳ: ಸಿಡಿಲು ಬಡಿದು ಮನೆಗೆ ಹಾನಿ

ಬಂಟ್ವಾಳ: ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಅಪಾರ ಹಾನಿಯುಂಟಾದ ಘಟನೆ ಬಂಟ್ವಾಳದ ಉರುವಾಲು ಗ್ರಾಮದಲ್ಲಿ ನಡೆದಿದೆ.
ತಾರಿದಡಿ ನಿವಾಸಿ ಸೇಸಪ್ಪ ಅವರ ಮನೆಗೆ ಸಿಡಿಲು ಬಡಿದಿದ್ದು, ಗೋಡೆ ಬಿರುಕು ಬಿಟ್ಟಿದೆ. ಇದರೊಂದಿಗೆ ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಸಿಡಿಲು ಬಡಿದ ಸಂದರ್ಭದಲ್ಲಿ ಸೇಸಪ್ಪ ಗೌಡರು ಮಕ್ಕಳನ್ನು ಶಾಲೆಯಿಂದ ಕರೆಕೊಂಡು ಬರಲು ತೆರಳಿದ್ದರು. ಹೀಗಾಗಿ ಅಪಾಯ ತಪ್ಪಿದಂತಾಗಿದೆ. ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ ಎಂದು ಸೇಸಪ್ಪ ಅವರು ಹೇಳಿದ್ದಾರೆ.