ಮಂಗಳೂರು: ಆಟೋ ಚಾಲಕ ನೇಣುಬಿಗಿದು ಆತ್ಮಹತ್ಯೆ
ಮಂಗಳೂರು: ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಎದುರು ಪದವಿನಲ್ಲಿ ನಡೆದಿದೆ.
ಮೂಡುಶೆಡ್ಡೆ ನಿವಾಸಿಯಾಗಿರುವ ಸಂತೋಷ್ ನೇಣಿಗೆ ಶರಣಾದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಎದುರುಪದವಿನಲ್ಲಿ ಬಾಡಿಗೆ ನಿವಾಸದಲ್ಲಿ ಇದ್ದ ಸಂತೋಷ್. ಇಂದು ಸಂಜೆ ತಮ್ಮ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಆಟೋ ಚಾಲಕರಾಗಿ ದುಡಿಯುತ್ತಿದ್ದ ಅವರ ಆತ್ಯಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಾವೂರು ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





