ಪತ್ನಿಯನ್ನು ನೀರಲ್ಲಿ ಮುಳುಗಿಸಿ ಕೊಲೆ ಮಾಡಿದ ಪತಿ

ದಾವಣಗೆರೆ: ಅನೈತಿಕ ಸಂಬಂಧಕ್ಕಾಗಿ ಎರಡನೇ ಪತ್ನಿಯನ್ನು ನೀರಲ್ಲಿ ಮುಳುಗಿಸಿ ಪತಿ ಕೊಲೆ ಮಾಡಿರುವ ಘಟನೆ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿಯಲ್ಲಿ ನಡೆದಿದೆ.
ಗೌರಮ್ಮ (39) ಮೃತ ದುರ್ದೈವಿ. ಚಿದಾನಂದ ಆಚಾರ್ಯ ಕೊಲೆ ಮಾಡಿದ ಆರೋಪಿ.
ಕಳೆದ ಕೆಲ ದಿನಗಳ ಹಿಂದೆ ಪಾಂಡೋಮಟ್ಟಿಯ ಹಳ್ಳದಲ್ಲಿ ಅರೆಬೆತ್ತಲೆಯಾಗಿ ಬಿದ್ದ ಓರ್ವ ಮಹಿಳೆಯ ಶವ ಪತ್ತೆಯಾಗಿತ್ತು. ಶವವನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಚಾರ ತಿಳಿಯುತ್ತಿದ್ದಂತೆ ಚನ್ನಗಿರಿ ಪೊಲೀಸರು ಸ್ಥಳಕ್ಕೆ ಹೋಗಿದ್ದಾರೆ.
ಮೇಲ್ನೋಟಕ್ಕೆ ಮಹಿಳೆ ಕಾಲುಜಾರಿ ಬಿದ್ದು ಸತ್ತಿರಬಹುದು ಎಂಬ ಅನುಮಾನ ಸ್ಥಳೀಯರಲ್ಲಿ ಹುಟ್ಟಿದೆ. ಆದರೆ, ಪೊಲೀಸರು ಇದು ಕೊಲೆ ಎಂದು ಸಂಶಯ ಪಟ್ಟು, ತನಿಖೆ ನಡೆಸಿದಾಗ ಸತ್ಯ ಹೊರ ಬಂದಿದೆ.