March 23, 2026

ಕುಂದಾಪುರ: ರಸ್ತೆ ಬದಿ ಹೋಗುತ್ತಿದ್ದಾಗ ಟಿಪ್ಪರ್ ಢಿಕ್ಕಿ: ವಿದ್ಯಾರ್ಥಿ ಸ್ಥಳದಲ್ಲೇ ಸಾವು

0
image_editor_output_image-318111425-1727847778115.jpg

ಕುಂದಾಪುರ: ರಸ್ತೆ ಬದಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿಧ್ಯಾರ್ಥಿ ಮೇಲೆ ಟಿಪ್ಪರ್ ಲಾರಿಯೊಂದು ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕೇರಿ ಎಂಬಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎಸ್ಸಿ ವಿದ್ಯಾರ್ಥಿ.

ಮಧ್ಯಾಹ್ನ ಕಾಲೇಜು ಮುಗಿಸಿ ತನ್ನ ಸ್ನೇಹಿತರ ಜೊತೆ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಧನುಷ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಧನುಷ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

Leave a Reply

Your email address will not be published. Required fields are marked *

error: Content is protected !!