March 18, 2026

ಜಮೀನಿನಲ್ಲಿ ಆಟವಾಡುತ್ತಿದ್ದಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವು

0
image_editor_output_image701451035-1727932088385.jpg

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ.

ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

You may have missed

error: Content is protected !!