May 5, 2026

ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಮೃತ್ಯು, ಮೂವರಿಗೆ ಗಾಯ

0
image_editor_output_image253005924-1727934771924.jpg

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಲಾರಿ ಹಿಂಬದಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಮೂವರಿಗೆ ಸಣ್ಣ ಪುಟ್ಟ ಗಾಯಗಳಾದ ಘಟನೆ ಆ.3ರ ಗುರುವಾರ ನಡೆದಿದೆ.

ಚನ್ನಪಟ್ಟಣ ಮೂಲದ ಚಂದ್ರಶೇಖರ (45) ಮೃತಪಟ್ಟವರು.

ಚನ್ನಪಟ್ಟಣ ತಾಲೂಕು ಸರ್ಕಾರಿ ಶಾಲಾ‌ ಶಿಕ್ಷಕರ ಸಂಘದ ಅಧ್ಯಕ್ಷರಾಗಿದ್ದ ಚಂದ್ರಶೇಖರ ತಮ್ಮ ಪುತ್ರನಿಗೆ ದಾವಣಗೆರೆಯಲ್ಲಿ ಮೆಡಿಕಲ್ ಕಾಲೇಜಿಗೆ‌ ಸೇರಿಸಲು ತೆರಳುತ್ತಿದ್ದಾಗ‌ ಈ ದುರ್ಘಟನೆ ನಡೆದಿದೆ.
ಚಂದ್ರಶೇಖರ ಅವರು ಪತ್ನಿ, ಇಬ್ಬರು ಮಕ್ಕಳನ್ನು ಕರೆದಕೊಂಡು ದಾವಣಗೆರೆಗೆ ತೆರಳುತ್ತಿದ್ದಾಗ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ಈ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *

error: Content is protected !!