ಕುಂದಾಪುರ: ಚಲಿಸುತ್ತಿದ್ದ ರೈಲಿನಿಂದ ಆಯಾತಪ್ಪಿ ಬಿದ್ದ ವ್ಯಕ್ತಿ
ಕೋಟ: ಚಲಿಸುತ್ತಿದ್ದ ರೈಲಿನಿಂದ ವ್ಯಕ್ತಿಯೋರ್ವ ಆಯಾತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಕುಂದಾಪುರ ತಾಲೂಕಿನ ಬೇಳೂರು ಕಂಬಳಗದ್ದೆ ಸಮೀಪ ಕೊಂಕಣ ರೈಲ್ವೆ ಮಾರ್ಗದಲ್ಲಿ ನಡೆದಿದೆ.
ಚಲಿಸುತ್ತಿರುವ ರೈಲಿನಿಂದ ಪ್ರಯಾಣಿಕನೊಬ್ಬ ಆಯಾತಪ್ಪಿ ಗದ್ದೆಗೆ ಉರುಳಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ಪ್ರಕರಣ ದಾಖಲಾಗಿದೆ.
ಆತನು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ನೋಡಿದ ಮಹಿಳೆಯು ತಕ್ಷಣವೇ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಧಾವಿಸಿ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ಗಂಭೀರ ಗಾಯಗೊಂಡ ವ್ಯಕ್ತಿ ಉತ್ತರ ಭಾರತ ಮೂಲದವರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





