February 4, 2026

ಬೆಳ್ತಂಗಡಿ: ಗಾಂಜಾ ಸಾಗಾಟ, ಮಾರಾಟ: 4 ಕೆ.ಜಿ. ಗಾಂಜಾ ಸಹಿತ ಆರೋಪಿಯ ಬಂಧನ

0
image_editor_output_image1765248133-1728017064459.jpg

ಬೆಳ್ತಂಗಡಿ: ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ, ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 4 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮ ಗೋಳಿಯಂಗಡಿ ಹೌಸ್‌ ನಿವಾಸಿ ಅಬುತಾಹಿರ್‌ ಯಾನೇ ಅನ್ವರ್‌ (25) ಬಂಧಿತ ಆರೋಪಿ. ಗಾಂಜಾ ಸಾಗಾಟ/ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಕಂಕನಾಡಿ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡೀಲ್‌ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ.

ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆಜಿ ಗಾಂಜಾ, ದ್ವಿಚಕ್ರ ವಾಹನ, ಮೊಬೈಲ್‌ ಫೋನ್‌ ಅನ್ನು ಸ್ವಾ ಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 1.75 ಲಕ್ಷ ರೂ. ಆಗಬಹು ಎಂದು ಅಂದಾಜಿಸಲಾಗಿದ್ದು, ಈ ಬಗ್ಗೆ ಕಂಕನಾಡಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!