March 22, 2026

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ:, ಜಾನುವಾರು ಸಹಿತ ನಾಲ್ವರು ಆರೋಪಿಗಳ ಬಂಧನ

0
image_editor_output_image1146825126-1728024904960.jpg

ಬೆಳ್ತಂಗಡಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಅಕ್ರಮ ಗೋ ಸಾಗಾಟ, ಅಕ್ರಮ ಗೋವಧೆ ಕಾರ್ಯ ಆರಂಭವಾಗಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ.

ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳಾಗಿದ್ದು ಈ ಘಟನೆಗೆ ಸಂಬಂಧಿಸಿ ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!