ಮಡಿಕೇರಿ: 3 ಕೋಟಿ ರೂ. ಮೌಲ್ಯದ ಹೈಡ್ರೋ ಗಾಂಜಾ ವಶಕ್ಕೆ: 7 ಮಂದಿಯ ಬಂಧನ

ಮಡಿಕೇರಿ: ಅಂತಾರಾಷ್ಟ್ರೀಯ ಮಾದಕ ವಸ್ತು ದಂಧೆ ಪ್ರಕರಣವನ್ನು ಭೇದಿಸಿರುವ ಕೊಡಗು ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಕೋಟ್ಯಾಂತರ ಮೌಲ್ಯದ ಹೈಡ್ರೋ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಕೊಡಗು ಜಿಲ್ಲೆಯ ಹೆಗ್ಗಳ ಗ್ರಾಮದ ನಾಸಿರುದ್ದೀನ್ ಎಂ.ಯು(26), ಎಡಪಾಲ ಗ್ರಾಮದ ಯಾಹ್ಯಾ ಸಿ.ಹೆಚ್(28), ಕುಂಜಿಲ ಗ್ರಾಮದ ಅಕನಾಸ್(26), ಬೇಟೋಳಿ ಗ್ರಾಮದ ವಾಜಿದ್(26), ಕೇರಳದ ಕಣ್ಣೂರು ಗ್ರಾಮದ ರಿಯಾಜ್(44), ಕಾಸರಗೋಡಿನ ಮೆಹರೂಫ್(37) ಹಾಗೂ ರವೂಫ್(28) ಬಂಧಿತ ಆರೋಪಿಗಳು.
ಇವರ ಬಳಿಯಿಂದ ಸುಮಾರು 3 ಕೋ.ರೂ.ಬೆಲೆ ಬಾಳುವ 3.31 ಕೆ.ಜಿ ಹೈಡ್ರೋ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಕಾರನ್ನು ವಶಕ್ಕೆ ಪಡೆಯಲಾಗಿದೆ.