March 22, 2026

ಕಡಬದಲ್ಲಿ ಕಾರು ಢಿಕ್ಕಿ: ಬೈಕ್ ಸವಾರ ಮೃತ್ಯು

0
image_editor_output_image1657654637-1728110378732.jpg

ಕಡಬ: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಕಡಬದಲ್ಲಿ ಆ.5ರ ಶನಿವಾರ ನಡೆದಿದೆ.

ಮೃತರನ್ನು‌ ಕಡಬ ಹಳೇ ಸ್ಟೇಷನ್ ನಿವಾಸಿ ಕಡಬ ಸಿ.ಎ. ಬ್ಯಾಂಕ್ ಮಾಜಿ ಉದ್ಯೋಗಿ ಹಸೈನಾರ್ ಎಂದು ಗುರುತಿಸಲಾಗಿದೆ.

ಹಸೈನಾರ್ ತನ್ನ ಮನೆಯಿಂದ ಕಡಬ ಕಡೆಗೆ ಬರುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ದೃಶ್ಯ ಸ್ಥಳೀಯ ಇಂಡಸ್ಟ್ರೀಸ್ ವೊಂದರ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Leave a Reply

Your email address will not be published. Required fields are marked *

error: Content is protected !!