ಬಂಟ್ವಾಳ ತಾಲೂಕಿನ ತುಂಬೆ, ಮಾರಿಪಳ್ಳ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಅಧಿಕಾರಿಗಳ ತಂಡದಿಂದ ದಾಳಿ: 20 ಬೋಟ್‌ಗಳ ವಶಕ್ಕೆ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಆದೇಶದಂತೆ ಬಂಟ್ವಾಳ ತಾಲೂಕಿನ ತುಂಬೆ, ಮಾರಿಪಳ್ಳ ಭಾಗದ ನೇತ್ರಾವತಿ ನದಿಯಲ್ಲಿ ಬೋಟ್ ಮೂಲಕ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಶುಕ್ರವಾರ ದ.ಕ. ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯ ಅಧಿಕಾರಿಗಳ ತಂಡ ಒಟ್ಟು 20 ಬೋಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಅಧಿಕಾರಿಗಳ ದಾಳಿಯ ವೇಳೆ ಮರಳುಗಾರಿಕೆ ನಡೆಸುತ್ತಿದ್ದ ಕಾರ್ಮಿಕರು ಓಡಿ ತಪ್ಪಿಸಿಕೊಂಡಿದ್ದಾರೆ.
ವಶಪಡಿಸಿಕೊಂಡ ದೋಣಿಗಳನ್ನು 4ರಂತೆ ಜೋಡಿಸಿಕೊಂಡು 5 ತಂಡಗಳ ಮೂಲಕ ನದಿಯಲ್ಲೇ ಮಂಗಳೂರಿನ ಅಡ್ಯಾರ್‌ವರೆಗೆ ಸಾಗಿಸಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಶಕ್ಕೆ ಒಪ್ಪಿಸಲಾಗಿದೆ.
ಬೋಟ್‌ಗಳಲ್ಲಿ ಯಾವುದೇ ರೀತಿಯ ಮರಳು ಪತ್ತೆಯಾಗಿಲ್ಲ. ಮರಳುಗಾರಿಕೆಯಲ್ಲಿ ತೊಡಗಿದ್ದವರು ಯಾರು, ಬೋಟ್‌ಗಳು ಯಾರಿಗೆ ಸಂಬಂಧಪಟ್ಟಿವೆ ಎಂಬುದರ ಕುರಿತು ಅಧಿಕಾರಿಗಳ ತನಿಖೆಯ ಬಳಿಕ ತಿಳಿದುಬರಬೇಕಿದೆ.





