March 22, 2026

ಲಾಡ್ಜ್ ನಲ್ಲಿ ಸರ್ಕಾರಿ ಶಾಲೆ ಶಿಕ್ಷಕ: ನೇಣುಬಿಗಿದು ಆತ್ಮಹತ್ಯೆ

0
image_editor_output_image-633656575-1728284459048.jpg

ಹಾಸನ: ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ ಬಿ.ಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಶನಿವಾರ ಅವರು ಲಾಡ್ಜ್‌ನಲ್ಲಿ ರೂಮ್ ಪಡೆದು ಉಳಿದುಕೊಂಡಿದ್ದರು.

ಬೇಲೂರು ತಾಲೂಕಿನ ತೊಳಲು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅವರು ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನಿವೃತ್ತಿಯಾಗಲು ಕೇವಲ ಮೂರು ವರ್ಷಗಳು ಮಾತ್ರ ಬಾಕಿ ಇತ್ತು. ರಂಗಸ್ವಾಮಿಯವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!