ಪತಿ, ಕುಟುಂಬಸ್ಥರಿಂದ ವರದಕ್ಷಿಣಿ ಕಿರುಕುಳ: ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
ಕೊಲಾರ: ಪತಿ ಮತ್ತು ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೊಲಾರದ ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.
ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.
ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.