ಕುಂದಾಪುರ: ಅಕ್ರಮವಾಗಿ ಪಟಾಕಿ ದಾಸ್ತಾನಿಟ್ಟ ಮನೆಯೊಂದಕ್ಕೆ ದಾಳಿ ನಡೆಸಿದ ಬೈಂದೂರು ಪೊಲೀಸರು ಪಟಾಕಿ ವಶಪಡಿಸಿಕೊಂಡ ಘಟನೆ ಬುಧವಾರ ಬೈಂದೂರು ತಾಲೂಕಿನ ಉಪ್ಪುಂದದ ಕಂಚಿಕಾನ್ ಎಂಬಲ್ಲಿ ನಡೆದಿದೆ.
ಇಲ್ಲಿನ ದತ್ತಾತ್ರೇಯ ಶೇಟ್ ಎಂಬಾತ ಪಟಾಕಿ ಅಕ್ರಮ ದಾಸ್ತಾನು ಮಾಡಿಟ್ಟುಕೊಂಡ ಆರೋಪಿಯಾಗಿದ್ದಾನೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.