ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿ: ಬೈಕ್ ನಲ್ಲಿದ್ದ ಮೂವರು ಸವಾರರು ಮೃತ್ಯು
ಕಲಬುರಗಿ : ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಢಿಕ್ಕಿಯಾಗಿ ಮೂವರು ಸವಾರರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಬಳಿ ಬುಧವಾರ(ಅ.10) ರಾತ್ರಿ ಸಂಭವಿಸಿದೆ.
ಗುರೂಜಿ ತಾಂಡಾ ನಿವಾಸಿಗಳಾದ ಅರ್ಜುನ್ ರಾಠೋಡ್, ರೋಹಿತ್ ಹಾಗೂ ಕೃಷ್ಣ ಮೃತ ದುರ್ದೈವಿಗಳು. ಮೂವರು ಲಾಡ್ಲಾಪುರ ಗ್ರಾಮದಿಂದ ತಾಂಡಾಕ್ಕೆ ಹೋಗುತ್ತಿದ್ದರು. ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡ ಮೂವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.





