ಮಂಗಳೂರು: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಹೊಡೆದಾಟ
ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಿಬ್ಬಂದಿಗಳ ವರ್ತನೆ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ ಆಡಿ ಬಸ್ ಓವರ್ ಟೇಕ್ ಮಾಡಿದ ಪ್ರಕರಣದ ಬೆನ್ನಲ್ಲೇ ಇದೀಗ ಖಾಸಗಿ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಎದುರೇ ಹೊಡೆದಾಡಿಕೊಂಡಿದ್ದಾರೆ.
ವಿಟ್ಲ-ಮಂಗಳೂರಿಗೆ ಬರುವ ಖಾಸಗಿ ಬಸ್ ಹಾಗೂ ಪುತ್ತೂರು-ಮಂಗಳೂರು ಮಧ್ಯೆ ಸಂಚರಿಸುವ ಬಸ್ ಸಿಬ್ಬಂದಿಗಳು ಪ್ರಯಾಣಿಕರ ಕಣ್ಮುಂದೆಯೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಉಗುಳುವ ವೇಳೆ ಇನ್ನೊಂದು ಬಸ್ ಸಿಬ್ಬಂದಿಗೆ ಬಿತ್ತೆಂಬ ನೆಪದಲ್ಲಿ ಸಿಬ್ಬಂದಿಗಳು ಪರಸ್ಪರ ಬಡಿದಾಡಿ ಕೊಂಡಿದ್ದಾರೆ ಎಂದು ಪ್ರಯಾಣಿಕರು ತಿಳಿಸಿದ್ದಾರೆ.




