February 3, 2026

ಐಷಾರಾಮಿ ಕಾರು ಢಿಕ್ಕಿ: ಡೆಲಿವರಿ ಏಜೆಂಟ್ ಸ್ಥಳದಲ್ಲೇ ಸಾವು

0
image_editor_output_image-217066134-1728640334679.jpg

ಪುಣೆ: ಐಷಾರಾಮಿ ಕಾರೊಂದು ಡಿಕ್ಕಿ ಹೊಡೆದು ಡೆಲಿವರಿ ಏಜೆಂಟ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುಣೆಯ ಮುಂಡ್ವಾ ಪ್ರದೇಶದಲ್ಲಿ ನಡೆದಿದೆ.

ಬೈಕ್ ಸವಾರ ರೌಫ್ ಶೇಖ್ ಮೃತ ವ್ಯಕ್ತಿ. ಆರೋಪಿಯಾದ ಆಯುಷ್ ತಯಾಲ್ (34)ನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ಚಾಲಕ ಪರಾರಿಯಾಗಲು ಯತ್ನಿಸಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆರೋಪಿಯು ಮೊದಲು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ ಬಳಿಕ ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧದ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯನ್ನು ಸಿಸಿಟಿವಿ ದೃಶ್ಯಗಳನ್ನಾಧರಿಸಿ ಕಾರನ್ನು ಗುರುತಿಸಿ ಬಂಧಿಸಲಾಗಿದೆ. ಮುಂಡ್ವಾ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 105, 281, 125 (ಎ), 132, 119,1 77, 184 ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮೃ*ತನ ಕುಟುಂಬಸ್ಥರು ಆಕ್ರೋಶಿಸಿದ್ದಾರೆ

Leave a Reply

Your email address will not be published. Required fields are marked *

You may have missed

error: Content is protected !!