March 22, 2026

ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ಢಿಕ್ಕಿ: ಕನಿಷ್ಠ 19 ಮಂದಿ ಗಾಯ

0
image_editor_output_image107897916-1728679771070.jpg

ಚೆನ್ನೈ: ತಮಿಳುನಾಡಿನ ತಿರುವಳ್ಳುವ‌ರ್ ಜಿಲ್ಲೆಯ ಗುಮ್ಮುಡಿಪೂಂಡಿಯಲ್ಲಿ ಶುಕ್ರವಾರ ರಾತ್ರಿ ಗೂಡ್ಸ್ ರೈಲೊಂದಕ್ಕೆ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ 13 ಬೋಗಿಗಳು ಹಳಿತಪ್ಪಿ ಕನಿಷ್ಠ 19 ಮಂದಿ ಗಾಯಗೊಂಡಿದ್ದಾರೆ.

ರಾತ್ರಿ ಸುಮಾರು 8.28ರ ವೇಳೆಗೆ ಘಟನೆ ನಡೆದಿದ್ದು, ಅಪಘಾತಕ್ಕೀಡಾಗುವ ವೇಳೆ ರೈಲು ಗಂಟೆಗೆ 75 ಕಿ.ಮಿ ವೇಗದಲ್ಲಿ ಚಲಿಸುತ್ತಿತ್ತು ಎಂದು ದಕ್ಷಿಣ ರೈಲ್ವೆ ತಿಳಿಸಿದೆ. 8.27ಕ್ಕೆ ಪೊನ್ನೇರಿ ರೈಲು ನಿಲ್ದಾಣ ದಾಟಿದ್ದ ರೈಲಿಗೆ, ಕವರೈಪೆಟ್ಟೆ ನಿಲ್ದಾಣಕ್ಕೆ ಪ್ರವೇಶಿಸಿಲು ಗ್ರೀನ್ ಸಿಗ್ನಲ್ ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!