March 22, 2026

ಮುಳ್ಳಯ್ಯನಗಿರಿ ತಿರುವಿನಲ್ಲಿ 250 ಅಡಿ ಪ್ರಪಾತಕ್ಕೆ ಉರುಳಿ ಬಿದ್ದ ಕಾರು

0
image_editor_output_image984844284-1728680353042.jpg

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಿರುವಿನಲ್ಲಿ ಪ್ರವಾಸಿಗರ ಕಾರೊಂದು ಪ್ರಪಾತಕ್ಕೆ ಉರುಳಿ ಬಿದ್ದಿದೆ. ಸುಮಾರು 250 ಅಡಿ ಆಳದ ಪ್ರಪಾತಕ್ಕೆ ಕಾರು ಉರುಳಿ ಬಿದ್ದಿದ್ದು, ಪ್ರಯಾಣಿಕರು ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.

ಕಾರಿನಲ್ಲಿ ಹೈದರಾಬಾದ್ ಮೂಲದ ಐವರು ಪ್ರವಾಸಿಗರು ಮುಳ್ಳಯ್ಯನಗಿರಿ ವೀಕ್ಷಣೆಗೆ ಬಂದಿದ್ದರು. ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಕ್ಷಣ ಘಟನೆ ವೀಕ್ಷಿಸಿದ ಕೆಲವರು ಪ್ರಪಾತಕ್ಕೆ ಬಿದ್ದಿದ್ದ ಪ್ರವಾಸಿಗರನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!