August 12, 2026

ನೆಲ್ಯಾಡಿ: ಆಂಬ್ಯುಲೆನ್ಸ್ ಮತ್ತು ಈಚರ್ ಲಾರಿ ನಡುವೆ ಅಪಘಾತ: ಆಂಬ್ಯುಲೆನ್ಸ್ ಚಾಲಕ ಮುಸ್ತಾಫ ಗಾಯ

0
image_editor_output_image-910374843-1728752975713

ಉಪ್ಪಿನಂಗಡಿ: ಆಂಬ್ಯುಲೆನ್ಸ್ ಮತ್ತು ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಎಂಬಲ್ಲಿ ಶನಿವಾರ ನಡೆದಿದೆ.

ಆಂಬ್ಯುಲೆನ್ಸ್ ಚಾಲಕ ಮುಸ್ತಾಫ ಎಂಬವರು ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಂಬ್ಯುಲೆನ್ಸ್ ಹಾಗೂ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಈಚರ್ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇದರಿಂದ ಎರಡೂ ವಾಹನಗಳು ಜಖಂಗೊಂಡಿವೆ. ಅಪಘಾತ ಸಂದರ್ಭ ಕೆಲ ಕಾಲ ಹೆದ್ದಾರಿ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯವಾಗಿದ್ದು, ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಸಹಕರಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!