ಇಬ್ಬರು ಮಕ್ಕಳು ಸಹಿಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಬೆಂಗಳೂರು: ಜಿಲ್ಲೆಯ ಯಲಹಂಕ ತಾಲೂಕಿನ ಗ್ರಾಮ ಸಿಂಗನಾಯಕನಹಳ್ಳಿಯ ಯಡಿಯೂರಪ್ಪ ನಗರದಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ನೇಣುಬಿಗಿದುಕೊಂಡು ದಂಪತಿ ಅವಿನಾಶ್(33), ಮಮತಾ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಹಣಕಾಸಿನ ಆರ್ಥಿಕ ತೊಂದರೆಯಿಂದ ಮನನೊಂದು ಕುಟುಂಬ ಆತ್ಮಹತ್ಯೆಗೆ ಶರಣಾಗಿದೆ.




